ನಮಸ್ಕಾರ ಎಲ್ಲಾ ಓದುಗರಿಗೆ :) ನನ್ನ ಬ್ಲಾಗಿಗೆ ಬಂದದ್ದಕ್ಕೆ ನಿಮಗೆ ಧನ್ಯವಾದಗಳು... ನಾನು ಇಲ್ಲಿ ಬರೆದಿರೋದು ಹೇಗಿದೆ ? ನಿಮಗೆ ಇಷ್ಟಾ ಆಯ್ತಾ ? :) ಇಲ್ವಾ ? :( ಏನಾದ್ರೂ ಪರ್ವಾಗಿಲ್ಲ, ಒಂದು ನಿಮಿಷ ನಿಮ್ಮ ಅನಿಸಿಕೆ ಬರೆದುಹೋಗಬೇಕಾಗಿ ವಿನಂತಿ. ನಿಮ್ಮ ಅನಿಸಿಕೆಗಳೇ ಇಲ್ಲಿನ ಬರಹಕ್ಕೆ ಸ್ಪೂರ್ತಿ....

Friday, April 13, 2007

ಮಳೆಯೇ ನಿನ್ನ ಮಾಯವಿದೇನೇ...



ಭೋರೆಂದು ಸುರಿದಿದೆ ಗಗನದಿಂದ
ಭುವಿಯ ದಾಹವ ತಣಿಸುವ ತವಕದಿಂದ...

ದಟ್ಟ ಮೋಡದಿಂದ ಸುರಿದುಬಂದಿಹೆ ನೀನು
ನಿನ್ನ ರಭಸವ ವರ್ಣಿಸುವುದೇನು...

ಜೊತೆಗೋಡಿ ಬಂದಿದೆ ವೇಗವಾಗಿ ಗಾಳಿ
ತಲೆದೊಗಿ ನಿಂತಿಹವು ಮರಗಿಡಗಳು ಕೇಳಿ...

ನೀಬಂದಿಹೆಯೇನು ಕೆರೆ, ನದಿಯ ಒಡಲು ತುಂಬಲು
ಹೇಳುವುದೇನು ಭುವಿಯು ಸಂತಸದಿ ನಗುತಿರಲು...

ಸುರಿದು ಬಾ ಮಳೆಯೆ ಸುರಿದು ಬಾ
ಬರಡು ನೆಲವನು ಹಸನುಗೊಳಿಸು ಬಾ...

ಕೊಂಚ ಕರುಣೆಯ ತೋರು
ನಿನ ರಭಸದಲೂ ಮಂದಹಾಸವ ಬೀರು...

ನೀ ನಮಗೆ ಜೀವಜಲ
ಕಾಯುನೀ ಸಕಲ ಜೀವಸಂಕುಲ...

ಮಳೆಯೇ ನಿನ್ನ ಮಾಯವಿದೇನೇ...

4 comments:

Prathi....... said...

nanage ee photo tumba ishta aaytu.... kavanakke heli maadisidange ide...

Unknown said...

pachhi bhala chennagide kavan, hege barita eru

ಅಂತರ್ವಾಣಿ said...

ಮಳೆಯ ಮಾಯೆ ತುಂಬಾ ಚೆನ್ನಗಿದೆ.
ನಿಮ್ಮ ಕವನಧಾರೆ ಕೂಡ ಹೀಗೆ ಇರಲಿ..

anusha said...

ಕವಿತೆ ಓದ್ತಾ ಇದ್ರೆ ಮಳೆ ಯಲ್ಲಿ ನೇಣಿ ಬೇಕು ಅನ್ಸತ್ತೆ